ಧಾರವಾಡ : ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಧಾರವಾಡ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 13 ರಂದು ಮತ ಎಣಿಕೆ ನಡೆಯುವುದರಿಂದ ಆ ದಿನವೂ ಬೆಳಿಗ್ಗೆ 6 ಗಂಟೆಯಿಂದ ಮೇ 14ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನ ನಿಷೇಧಿಸಲಾಗಿದೆ. ಈ ಹಿನ್ನೆಯೆಲ್ಲಿ ಜಿಲ್ಲೆಯಲ್ಲೂ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ ಎಂದರು.
ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 7,65,160 ಪುರುಷ ಮತದಾರರು, 7,57,831 ಮಹಿಳಾ ಮತದಾರರಿದ್ದಾರೆ. ಇತರೆ 89 ಮತದಾರರಿದ್ದು, ಒಟ್ಟು 15,23,080 ಮತದಾರರಿದ್ದಾರೆ. ಈಗಾಗಲೇ 80 ವರ್ಷ ಮೇಲ್ಪಟ್ಟ ಒಟ್ಟು 1,615 ಮಂದಿ ಮತದಾನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.