ಎಂ ಕರುಣಾನಿಧಿ ಅನಾರೋಗ್ಯ: ಆಸ್ಪತ್ರೆ ಮುಂದೆ ಹೈಡ್ರಾಮಾ

ಸೋಮವಾರ, 30 ಜುಲೈ 2018 (05:21 IST)
ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದ ಬಗ್ಗೆ ಹಲವಾರು ವದಂತಿಗಳು ಹುಟ್ಟಿಕೊಳ್ಳುತ್ತಿದ್ದಂತೆ ನಿನ್ನೆ ತಡರಾತ್ರಿ ನಗರದ ಕಾವೇರಿ ಆಸ್ಪತ್ರೆಯ ಮುಂದೆ ಹೈಡ್ರಾಮಾವೇ ನಡೆದಿದೆ.

ಕರುಣಾನಿಧಿ ಆರೋಗ್ಯ ಸ್ಥಿತಿ ತೀವ್ರ ಬಿಗಡಾಯಿಸಿದೆ. ಅವರ ಕುಟುಂಬ ವರ್ಗ, ಡಿಎಂಕೆ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಮುಂದಿನ ಕಾರ್ಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ತಿಳಿದ ನಂತರ ಆಸ್ಪತ್ರೆ ಮುಂದೆ ಜಮಾಯಿಸಿದ ಸಾವಿರಾರು ಮಂದಿ ನೂಕು ನುಗ್ಗಲು ಉಂಟುಮಾಡಿದರು.

ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಬಳಿಕ ಆಸ್ಪತ್ರೆಯ ವೈದ್ಯರು ಕರುಣಾನಿಧಿ ಆರೋಗ್ಯ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂಬ ಹೇಳಿಕೆ ಬಿಡುಗಡೆ ಮಾಡಿದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನವಾಗಿಲ್ಲ. ಕೊನೆಗೆ ತಡರಾತ್ರಿ ಪುತ್ರ ಎಂಕೆ ಸ್ಟಾಲಿನ್ ಸಾರ್ವಜನಿಕವಾಗಿ ಶಾಂತಿ ಕಾಪಾಡುವಂತೆ ಮನವಿ ಮಾಡಬೇಕಾಯಿತು. ಜ್ವರ ಮತ್ತು ಮೂತ್ರ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಕರುಣಾನಿಧಿ ರಕ್ತದೊತ್ತಡ ತೀರಾ ಏರುಪೇರಾಗಿದ್ದರಿಂದ ಕಾವೇರಿ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ