ಜೆಡಿಎಸ್ ಬಗ್ಗೆ ವೇಣುಗೋಪಾಲ್ ಬಳಿ ಅಸಮಾಧಾನ ತೋಡಿಕೊಂಡ ಮಲ್ಲಿಕಾರ್ಜುನ ಖರ್ಗೆ

ಶನಿವಾರ, 2 ಜೂನ್ 2018 (13:54 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧವಾಗಿ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಬಳಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ರಚನೆಗೂ ಮೊದಲು 5 ವರ್ಷ ಸಿಎಂ ಪಟ್ಟ ಜೆಡಿಎಸ್ ಗೆ ಎಂದಿರಲಿಲ್ಲ. ಆದರೆ ನಂತರ 5 ವರ್ಷದ ಒಪ್ಪಂದ ಮಾಡಿಕೊಂಡರು. 37 ಸ್ಥಾನ ಗೆದ್ದ ಜೆಡಿಎಸ್ ಗೆ 78 ಸ್ಥಾನ ಹೊಂದಿರುವ ಕಾಂಗ್ರೆಸ್ ಐದೂ ವರ್ಷವೂ ಸಿಎಂ ಪಟ್ಟ ಬಿಟ್ಟುಕೊಡಬೇಕಾ? ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಮೊದಲು ರಾಜ್ಯದಲ್ಲಿ ಚುನಾವಣೆ ಟಿಕೆಟ್ ಹಂಚಿಕೆ ವೇಳೆಯೂ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಖಾತೆ ಹಂಚಿಕೆ, ಸಿಎಂ ಸ್ಥಾನದ ಒಪ್ಪಂದದ ಬಗೆಗೂ ಖರ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ