ಬೆಂಗಳೂರು : ಮುಸ್ಲಿಂ ಬಾಂಧವರ ಮತ್ತೊಂದು ಪ್ರಮುಖ ಹಬ್ಬವಾದ ಬಕ್ರೀದ್ ಆಚರಣೆಗೆ (ಜು.10) ಸಿದ್ಧತೆ ನಡೆದಿದೆ.
ಹಬ್ಬ ಆಚರಣೆಗೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಬಾರಿ ಬಕ್ರೀದ್ ಹಬ್ಬದ ವೇಳೆ ಜಾನುವಾರುಗಳನ್ನು ಬಲಿ ನೀಡಲು ಅವಕಾಶ ಇರುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿಕೆ ನೀಡಿದ್ದರು. ಅದರಂತೆ ಪ್ರಾಣಿ ಬಲಿಗೆ ಹಲವು ನಿರ್ಬಂಧಗಳನ್ನು ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಜಾರಿಯಲ್ಲಿರುವ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಕರುಗಳನ್ನು ಬಲಿ ನೀಡುವಂತಿಲ್ಲ. ಬಲಿ ನೀಡುವುದಕ್ಕಾಗಿ ಅವುಗಳನ್ನು ಸಾಗಾಟ ಮಾಡುವಂತೆಯೂ ಇಲ್ಲ ಎಂದು ಸೂಚಿಸಿದೆ.