ಆರ್ಥಿಕ ಪ್ರಗತಿಯನ್ನು ಕೊಂಡಾಡಿದ ಮಾರ್ಟಿನ್ ವುಲ್ಫ್

ಶುಕ್ರವಾರ, 20 ಜನವರಿ 2023 (07:46 IST)
ದಾವೋಸ್ : ಮುಂದಿನ 10-20 ವರ್ಷಗಳ ಕಾಲ ವಿಶ್ವದಲ್ಲೇ ಭಾರತ ಅತ್ಯಂತ ವೇಗವಾದ ಆರ್ಥಿಕ ಪ್ರಗತಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮುವುದು ಖಚಿತ,

ಫೈನಾನ್ಷಿಯಲ್ ಟೈಮ್ಸ್ನ ಮುಖ್ಯ ಅರ್ಥಶಾಸ್ತ್ರ ನಿರೂಪಕ ಮಾರ್ಟಿನ್ ವುಲ್ಫ್ ಭವಿಷ್ಯ ನುಡಿದಿದ್ದಾರೆ.

ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಅಧಿವೇಶನವೊಂದರಲ್ಲಿ ಮಾತನಾಡಿದ ಅವರು, 70ರ ದಶಕದಿಂದ ನಾನು ಭಾರತದ ಆರ್ಥಿಕತೆಯನ್ನು ಗಮನಿಸುತ್ತಾ ಬಂದಿದ್ದೇನೆ.

ಮುಂದಿನ 10-20 ವರ್ಷಗಳಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ಇದರಲ್ಲಿ ಯಾವುದೇ ಸಂಶಯವೇ ಇಲ್ಲ ಎಂದು ಎಂದು ಹೇಳಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ