ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ !

ಬುಧವಾರ, 27 ಏಪ್ರಿಲ್ 2022 (14:01 IST)
ತಿರುವನಂತಪುರಂ : ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸಭೆ ಬೆನ್ನಲ್ಲೆ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕೆಲಸದ ಸ್ಥಳಗಳಲ್ಲೂ, ಪ್ರಯಾಣದ ವೇಳೆಯೂ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿದೆ.

ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಬೇಕೆಂದು ಇದೇ ವೇಳೆ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಮೂಲಕ ಕೊವೀಡ್ ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಕೇರಳ ಸರ್ಕಾರ ಎಚ್ಚರಿಕೆ ನೀಡಿದೆ.

ಕೋವಿಡ್ 4 ನೇ ಅಲೆ ವ್ಯಾಪಕಗೊಳ್ಳಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ಪೊಲೀಸರು ಮಾಸ್ಕ್ ಧರಿಸದವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. 

ಇತ್ತ ಇಂದು ವಿವಿಧ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೇನ್ಸ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿಗೆ ಕರ್ನಾಟಕ ರಾಜ್ಯದ ಕೋವಿಡ್ ಪರಿಸ್ಥಿತಿಯ ವರದಿ ಒಪ್ಪಿಸಲಾಯಿತು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಿಎಂ ಅವರು ಪ್ರಧಾನಿಗೆ ಮಾಹಿತಿ ಕೊಟ್ಟರು.

ನಾಲ್ಕನೇ ಅಲೆಗೆ ಕೈಗೊಂಡ ಸಿದ್ಧತೆ ಬಗ್ಗೆ, ಲಸಿಕೆ, ಬೂಸ್ಟರ್ ಲಸಿಕೆಯ ಪ್ರಗತಿ ಹಾಗೂ ಲಸಿಕೆಗಳ ಬಗ್ಗೆ ಪಿಎಂಗೆ ಅಂಕಿ ಅಂಶ ಸಮೇತ ಮಾಹಿತಿ ನೀಡಿದರು. ಈ ವೇಳೆ ಪ್ರಧಾನಿಯವರು ಟೆಸ್ಟಿಂಗ್ ಹೆಚ್ಚಿಸಲು ಸೂಚನೆ ನೀಡಿದರು. ಆರಂಭದಲ್ಲೆ ಟೆಸ್ಟಿಂಗ್ ಹೆಚ್ಚಿಸುವ ಮೂಲಕ ಕೊರೊನಾ ಕಂಟ್ರೋಲ್ ಗೆ ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ