ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ತಗ್ಗಿದೆ. ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಕ್ಕಿಳಿದು, ಶೇ.3.47ರಷ್ಟು ದಾಖಲಾಗಿದೆ.
ಶುಕ್ರವಾರ 58,077 ಕೋವಿಡ್ ಕೇಸ್ಗಳು ದೃಢಪಟ್ಟಿವೆ. ಕರ್ನಾಟಕದಲ್ಲೂ ಪಾಸಿಟಿವಿಟಿ ದರ ಶೇ.3.47ಕ್ಕೆ ಇಳಿದಿದ್ದು, 3976 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೂರದ ಸ್ವೀಡನ್ ಸರ್ಕಾರ ಸೋಂಕು ಪತ್ತೆ ಪರೀಕ್ಷೆಯನ್ನೇ ಕೈಬಿಟ್ಟಿದ್ದರೆ ಇತ್ತ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಎಂಬ ನಿಯಮ ಕೈಬಿಡುವ ಬಗ್ಗೆ ಚಿಂತನೆ ನಡೆಸುತ್ತಿದೆ.
ಆ ದೇಶಗಳಲ್ಲಿ ಇದು ಸಾಧ್ಯವಾಗಿದ್ದು ಹೇಗೆ ಎಂಬ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಜೊತೆಗೆ ಕೋವಿಡ್ ಕೇಸ್ಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ನಿಯಮ ಕೈಬಿಡುವ ಸಂಬಂಧ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಕೋವಿಡ್ ಕಾರ್ಯಪಡೆಯಿಂದ ಮಾಹಿತಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.