ಮುಟ್ಟಿನ ರಜೆ : ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲು ನಿರಾಕರಿಸಿದ ಸುಪ್ರೀಂ

ಶನಿವಾರ, 25 ಫೆಬ್ರವರಿ 2023 (08:44 IST)
ನವದೆಹಲಿ : ಭಾರತದಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಯನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಲೇವಾರಿ ಮಾಡಿದೆ.
 
ಅರ್ಜಿದಾರರು ಕೇಂದ್ರ ಸರ್ಕಾರದ ಮುಂದೆ ಪ್ರಾತಿನಿಧ್ಯವನ್ನು ನೀಡಲು ಅವಕಾಶ ನೀಡಿದೆ. ಶೈಲೇಂದ್ರ ಮಣಿ ತ್ರಿಪಾಠಿ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ,

ಪ್ರಕರಣವೂ ಸರ್ಕಾರದ ನೀತಿಗೆ ಸಂಬಂಧಿಸಿದೆ. ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮುಂದೆ ಪ್ರಾತಿನಿಧ್ಯವನ್ನು ಸಲ್ಲಿಸಬಹುದು ಎಂದು ಹೇಳಿದೆ.

ಸಮಾಜ, ಸರ್ಕಾರವು ಮಹಿಳೆಯರ ಮುಟ್ಟಿನ ಅವಧಿಯನ್ನು ಹೆಚ್ಚಾಗಿ ಕಡೆಗಣಿಸಿದೆ. Ivipanan, Zomato, Byju’s, Swiggy, Mathrubhumi, Magzter, Industry, ARC, FlyMyBiz ಮತ್ತು Gozoop ನಂತಹ ಕಂಪನಿಗಳು ಮುಟ್ಟಿನ ರಜೆ ನೀಡುವ ಮೂಲಕ ಮಹಿಳೆಯರಿಗೆ ಕೆಲಸ ಮಾಡಲು ಬೆಂಬಲಿಸಿವೆ. ಇದೇ ಮಾದರಿಯಲ್ಲಿ ಮುಟ್ಟಿನ ಅವಧಿಯಲ್ಲಿ ರಜೆ ನೀಡಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ