ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬುಧವಾರ, 17 ನವೆಂಬರ್ 2021 (07:31 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ.
ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ. ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ