ಹಾಲಿನ ದರ ಏರಿಕೆ!

ಶನಿವಾರ, 15 ಜನವರಿ 2022 (17:58 IST)
ಬೆಂಗಳೂರು : ಹಾಲಿನ ದರ ಲೀಟರ್ಗೆ 3 ರೂ. ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ ಚಿಂತನೆ ಮಾಡಿದೆ ಎಂಬ ಸುದ್ದಿ ಮೂಲಗಳಿಂದ ವರದಿಯಾಗಿದೆ.

ಪ್ರತಿ ಲೀಟರ್ಗೆ 3 ರೂ. ಏರಿಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಲೀಟರ್ಗೆ 37 ರೂ. ಇದ್ದು, ಅದನ್ನು 40 ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

 ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2020-21) ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ದರ ಏರಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ದೇಶದ ಇತರೆ ಜಿಲ್ಲೆಗಳಿಗೆ ಹೋಲಿಸಿದ್ರೆ, ನಂದಿನಿ ಹಾಲಿನ ದರ ರಾಜ್ಯದಲ್ಲಿ ಅತಿ ಕಡಿಮೆ ಇದೆ.

ಈ ಹಿನ್ನಲೆ, ಹಾಲಿನ ದರ ಏರಿಕೆ ಮಾಡುವ ಕುರಿತು ಸಿಎಂ ಜೊತೆ ಮುಂದಿನ ವಾರ ಚರ್ಚಿಸಿ, ಶಿಫಾರಸ್ಸು ಮಾಡಲು ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ