ಹಾಲು, ನೀರು, ವಿದ್ಯುತ್ ದರ ಏರಿಕೆ !

ಶನಿವಾರ, 22 ಜನವರಿ 2022 (10:45 IST)
ಬೆಂಗಳೂರು : ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದರ ಏರಿಕೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.
 
ಅವಸರದ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳುವುದಿಲ್ಲ. ಎಲ್ಲಾ ಆಯಾಮಗಳಿಂದಲೂ ಚರ್ಚೆ ಮಾಡುತ್ತೇವೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪಗಳು ಬರೋದು ಸಹಜ ಎಂದಿದ್ದಾರೆ. ವೀಕೆಂಡ್ ಕರ್ಫ್ಯೂ ರದ್ದು ನಿರ್ಧಾರ ಒತ್ತಡದಿಂದ ಮಾಡಿದ್ದಲ್ಲ.

ಕೊರೊನಾ ಕೇಸ್ ಹೆಚ್ಚಿದ್ದರೂ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಕೊರೊನಾ ಸೋಂಕಿತರ ಗುಣಮುಖ ದರವೂ ಹೆಚ್ಚಿದೆ. ಹೀಗಾಗಿ ಜನರಿಗೆ ಸಮಸ್ಯೆ ಆಗಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ತಿಳಿಸಿದರು.

ಮುಂದುವರಿದು ಮಾತನಾಡಿದ ಸಿಎಂ, ಕೃಷ್ಣಾ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ರಾಜ್ಯದ ವಾದ ಮಂಡಿಸುವ ತಜ್ಞರೊಂದಿಗೆ ಸಭೆ ಮಾಡುತ್ತಿದ್ದೇವೆ. ನಮ್ಮ ಕಾನೂನು ತಜ್ಞರ ತಂಡ ಕೂಡ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತಿದೆ. ನಮ್ಮ ಜಲ ವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ, ಗಂಭೀರವಾಗಿ ಪರಿಗಣಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಡುತ್ತೇವೆ ಅಂತ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ