ರಾಜ್ಯದಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ

ಬುಧವಾರ, 19 ಜುಲೈ 2023 (07:42 IST)
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಜು.18, 19) ರಂದು ಭಾರಿ ಮಳೆಯಾಗಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
 
ಕರಾವಳಿಯಲ್ಲಿ ಬಿರುಗಾಳಿಯು 40 ರಿಂದ 45 ಕಿಮೀ ವೇಗದಲ್ಲಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಒತ್ತರ ಒಳನಾಡು ಪ್ರದೇಶಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೇ ಮುಂದಿನ ಮೂರು ದಿನ ಅಂದರೆ 19, 20, 21 ರಂದು ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರ್ಗಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ