ಭಾರತಕ್ಕೆ ಮಂಕಿಪಾಕ್ಸ್ ಆತಂಕ?
ಕಳೆದ 10 ದಿನಗಳಲ್ಲಿ ಸ್ಥಳೀಯವಲ್ಲದ 12 ದೇಶಗಳಲ್ಲಿ 92 ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ.
ಶಂಕಿತ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿರುವ ವಿಶ್ವ ಆರೋಗ್ಯ ಸಂಸ್ಥೆ, ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಅನೇಕ ದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಿರುವುದರಿಂದ ಹೆಚ್ಚಿನ ಪ್ರಕರಣಗಳನ್ನು ಗುರುತಿಸಲು ಸಾಧ್ಯವಾಗುತ್ತಿದೆ. ಹೆಚ್ಚು ಸಮಸ್ಯೆಗೆ ಒಳಗಾಗುವವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಹಾಗೂ ಯುರೋಪ್ನ 9 ದೇಶಗಳಲ್ಲಿ ಸೋಂಕು ಖಚಿತವಾಗಿದೆ.