ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ

ಮಂಗಳವಾರ, 26 ಜುಲೈ 2022 (09:33 IST)
ಬೆಂಗಳೂರು : ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ.
 
ಮಂಕಿಪಾಕ್ಸ್ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು.

ವಿಮಾನ ನಿಲ್ದಾಣ, ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕ್ರಮವಹಿಸಬೇಕು. ರೋಗ ಲಕ್ಷಣ ಇರುವವರ ಚಿಕಿತ್ಸೆ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿರೋ ಮುನ್ನೆಚ್ಚರಿಕಾ ಕ್ರಮಗಳೇನು?
ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಕಡ್ಡಾಯ, ಸೋಂಕಿತ ಪ್ರದೇಶಗಳಿಂದ ಬಂದ ಜನರಿಗೆ ರೋಗ ಲಕ್ಷಣ ಇದೆಯಾ ಅಂತಾ ಪತ್ತೆ ಹಚ್ಚುವುದು, ರೋಗ ಲಕ್ಷಣರಹಿತ ವ್ಯಕ್ತಿಗಳ ವಿವರ ಕಡ್ಡಾಯವಾಗಿ ದಾಖಲಿಸಬೇಕು. ಏನಾದ್ರು ಸೋಂಕಿನ ಲಕ್ಷಣ ಕಾಣಿಸಿಕೊಳ್ಳುತ್ತಾ ಅಂತಾ 21 ದಿನಗಳ ಕಾಲ ನಿಗಾ ವಹಿಸಬೇಕು. 

ಮಂಕಿಪಾಕ್ಸ್ ಸೋಂಕಿನ ಶಂಕಿತರನ್ನು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು 21 ದಿನಗಳ ಕಾಲ ಐಸೊಲೇಟ್ ಮಾಡಿ ನಿಗಾವಹಿಸಬೇಕು. ಸೋಂಕು ಕಂಡು ಬಂದರೆ ಪ್ರತ್ಯೇಕವಾಗಿ ಐಸೂಲೇಟ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ