ಬೆಂಗಳೂರು : ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ಮೊದಲ ಬಲಿ ಪಡೆದ ಮೇಲೆ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದಲ್ಲೂ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಕಂಡು ಬಂದ ಹಿನ್ನೆಲೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುತ್ತೋಲೆ ಹೊರಡಿಸಿದ್ದಾರೆ.
ಮಾರ್ಗಸೂಚಿ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಕಣ್ಗಾವಲು, ಸಾಂಸ್ಥಿಕ ಐಸೋಲೇಶನ್ಗಾಗಿ ಸೂಕ್ತ ಸ್ಥಳಗಳನ್ನು ಗೊತ್ತು ಪಡಿಸುವುದು,
ಕಡ್ಡಾಯ ಸಂಪರ್ಕ ಪತ್ತೆ ಮತ್ತು ಸ್ಯಾಂಪಲ್ಗಳ ಪರೀಕ್ಷೆ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದಿದ್ದಾರೆ.