ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ಸೋಮವಾರ, 24 ಜುಲೈ 2023 (07:05 IST)
ಬೆಂಗಳೂರು : ಜೂನ್ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈನಲ್ಲಿ ಚುರುಕು ಪಡೆದುಕೊಂಡಿದ್ದು, ಜುಲೈ ಒಂದರಿಂದ ಇಂದಿನ ವರೆಗೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
 
ಜುಲೈ 1ರಿಂದ ಜುಲೈ 22ರವೆರೆಗೆ ವಾಡಿಕೆಯಂತೆ ಸರಾಸರಿ 192ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದ್ರೆ, ಇದೀಗ ಜುಲೈ 1ರಿಂದ ಜುಲೈ 22ರವರೆಗೆ 215ಮಿಲಿ ಮೀಟರ್ ಮಳೆಯಾಗಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಅದರಲ್ಲೂ ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಇದರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಸೇತುವೆಗಳ ಮುಳುಗಡೆಯಾಗಿದ್ದು, ಸಂಚಾರ ಬಂದ್ ಆಗಿವೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದೆ. ರಾಜ್ಯದಲ್ಲಿ ಈ ಬಾರಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚುವರಿ ಮಳೆ ಆಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣ ಶೇ.15ರಿಂದ ಶೇ.20ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯದ ಹವಾಮಾನ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ