ನವದೆಹಲಿ : ಭಾರತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಬಳಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.
ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್‍ಗಳನ್ನು ತಯಾರಿಸುವಂತೆ ಹೆಲ್ಮೆಟ್ ತಯಾರಕರಿಗೆ ಸರ್ಕಾರ ಸೂಚಿಸಿದೆ. ಹೊಸ ನಿಯಮದ ಪ್ರಕಾರ ಉಲ್ಲಂಘನೆಗೆ 1,000 ರೂ. ದಂಡ ಮತ್ತು 3 ತಿಂಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ.
ಹೊಸ ನಿಯಮಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ 1989ರ ತಿದ್ದುಪಡಿಯ ಮೂಲಕ ಪ್ರಸ್ತಾಪಿಸಲಾಗಿದೆ. ಪ್ರಸ್ತಾವಣೆಯು ನಾಲ್ಕು ವರ್ಷ ವಯಸ್ಸಿನ ಮಕ್ಕಳನ್ನು ಒಳಗೊಂಡಿರುತ್ತದೆ.
ಮಗುವನ್ನು ಹೊಂದಿರುವ ಯಾವುದೇ ದ್ವಿಚಕ್ರ ವಾಹನವು ಗಂಟೆಗೆ ಗರಿಷ್ಠ 40-ಕಿಮೀ ವೇಗದ ಮಿತಿಯಲ್ಲಿ ಪ್ರಯಾಣಿಸಬೇಕಾಗುತ್ತದೆ.
30 ಕೆಜಿ ತೂಕವನ್ನು ಹೊರುವ ಸಾಮಥ್ರ್ಯವನ್ನು ಹೊಂದಿರಬೇಕು. ನಾಲ್ಕು ವರ್ಷದೊಳಗಿನ ಮಕ್ಕಳು ಕ್ರ್ಯಾಶ್ ಹೆಲ್ಮೆಟ್ ಅಥವಾ ಬೈಸಿಕಲ್ ಹೆಲ್ಮೆಟ್ ಅನ್ನು ಧರಿಸಬೇಕು. ಸರ್ಕಾರವು ನಿರ್ದಿಷ್ಟಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸೂಚಿಸಿದೆ.