ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಮುಹೂರ್ತ ಫಿಕ್ಸ್

ಭಾನುವಾರ, 16 ಜುಲೈ 2023 (09:46 IST)
ಬೆಂಗಳೂರು : ಪ್ರತಿ ಮನೆ ಯಜಮಾನಿಗೆ 2000 ನೀಡುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಂತೂ ಇಂತೂ ಮುಹೂರ್ತ ಕೂಡಿಬಂದಿದೆ.
 
ಇದೇ ಜುಲೈ 19 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸಂಜೆ 5.30ಕ್ಕೆ ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಅದೇ ದಿನದಿಂದ ಫಲಾನುಭವಿಯಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಆಗಸ್ಟ್ 16 ಅಥವಾ 17ರಂದು ಯಜಮಾನಿ ಖಾತೆಗೆ 2000 ರೂ. ಹಣ ಹಾಕುತ್ತೇವೆ ಎಂದು ಈಗಾಗಲೇ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ   ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಯೋಜನೆಗೆ ಯಾರು ಅರ್ಹರು?
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ.

ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ