ವಿವಾದಕ್ಕೆ ಕಾರಣವಾಯ್ತು ಮುಜರಾಯಿ ಇಲಾಖೆ ಆದೇಶ?

ಭಾನುವಾರ, 13 ನವೆಂಬರ್ 2022 (07:46 IST)
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶವೊಂದು ಈಗ ವಿವಾದಕ್ಕೆ ಕಾರಣವಾಗಿದೆ.
 
ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಮುದ್ರಾಧಾರಣೆ, ಜಯಂತಿ ಆಚರಣೆ ಮಾಡುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ನವೆಂಬರ್ 2ರಂದು ಆದೇಶ ಹೊರಡಿಸಲಾಗಿದೆ.

ಇವುಗಳೆಲ್ಲಾ ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಇವುಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ತಪ್ಪಿದಲ್ಲಿ ಅಂಥವರ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಈ ಆದೇಶಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದು ಅಸಂಬದ್ಧ ಆದೇಶ. ಇದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಮಾಧ್ವ ತತ್ವದ ಅನುಯಾಯಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ