ಮೋಚಾ ಅಬ್ಬರಕ್ಕೆ ನಲುಗಿದ ಮ್ಯಾನ್ಮಾರ್ ! 6 ಸಾವು, 700ಕ್ಕೂ ಹೆಚ್ಚು ಜನರಿಗೆ ಗಾಯ

ಬುಧವಾರ, 17 ಮೇ 2023 (09:09 IST)
ನೈಪಿಡಾವ್ : ಬಂಗಾಳಕೊಲ್ಲಿಯಲ್ಲಿ ಹುಟ್ಟಿಕೊಂಡಿರುವ ಮೋಚಾ ಚಂಡಮಾರುತ ಭಾರತ, ಬಾಂಗ್ಲಾ ಹಾಗೂ ಮ್ಯಾನ್ಮಾರ್ ದೇಶಗಳಲ್ಲಿ ಭೀತಿ ಹುಟ್ಟಿಸಿದೆ. ಇದು 1982ರ ಬಳಿಕ ಬಂಗಾಳಕೊಲ್ಲಿಯಲ್ಲಿನ 2ನೇ ಅತ್ಯಂತ ತೀವ್ರವಾದ ಚಂಡಮಾರುತ ಎನ್ನಲಾಗಿದೆ.
 
ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಚಂಡಮಾರುತದ ಹೊಡೆತಕ್ಕೆ ಮ್ಯಾನ್ಮಾರ್ನ ರಖೈನ್ ರಾಜ್ಯದಲ್ಲಿ ಸಿಟ್ವೆ ಟೌನ್ಶಿಪ್ ಬಳಿ ಭೂಕುಸಿತವಾಗಿದೆ. ಕಟ್ಟಡವೊಂದರ ಛಾವಣಿ ಕುಸಿದು ಕನಿಷ್ಠ 6 ಜನರು ಸಾವನ್ನಪ್ಪಿದ್ದಾರೆ. ರಸ್ತೆಗಳು ನೀರಿನಿಂದ ತುಂಬಿ ಹರಿದು ನದಿಗಳಾಗಿ ಪರಿವರ್ತನೆಗೊಂಡಿವೆ. ಮರ, ಕಂಬಗಳು ಬಿದ್ದು, ಸಂಪರ್ಕವೂ ಕಡಿತಗೊಂಡಿದೆ ಎಂದು ವರದಿಯಾಗಿದೆ.

ಚಂಡಮಾರುತ ಗಂಟೆಗೆ ಸುಮಾರು 209 ಕಿ.ಮೀ ವೇಗದ ಪ್ರಬಲ ಗಾಳಿ ಹೊಂದಿದೆ ಎನ್ನಲಾಗಿದೆ. ಇದರಿಂದ ಹಲವು ನಗರಗಳ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು, ಮೊಬೈಲ್ ಫೋನ್ ಟವರ್ಗಳು, ದೋಣಿಗಳು ಮತ್ತು ದೀಪದ ಕಂಬಗಳಿಗೆ ಹಾನಿಯಾಗಿದೆ. ಬಲವಾದ ಗಾಳಿಯಿಂದಾಗಿ ಸಿಟ್ವೆ ಟೌನ್ಶಿಪ್ನ ಎತ್ತರದ ಪ್ರದೇಶಗಳಲ್ಲಿ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದ ಸುಮಾರು 20,000 ಜನರಲ್ಲಿ 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ