ಆರೋಪ ಬೆನ್ನಲ್ಲೇ ರಾಜ್ಯದಲ್ಲಿ 6 ಲಕ್ಷ ಮತದಾರರ ಹೆಸರು ಡಿಲೀಟ್!
ಶುಕ್ರವಾರ, 18 ನವೆಂಬರ್ 2022 (15:10 IST)
ಬೆಂಗಳೂರು : ಚಿಲುಮೆ ಸಂಸ್ಥೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಿಬಿಎಂಪಿಯ ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ಅನುಮಾನ ವ್ಯಕ್ತವಾಗಿದೆ.
ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. 243 ವಾರ್ಡ್ಗಳ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿತ್ತು.
ಈಗಾಗಲೇ ಚಿಲುಮೆ ಸಂಸ್ಥೆಯ ಸಿಬ್ಬಂದಿ ಬಿಎಲ್ಒಗಳು ಎಂದು ಐಡಿ ಕಾರ್ಡ್ ತಯಾರಿಸಿ ಮನೆ ಮನೆಗೂ ಹೋಗಿ ಮಾಹಿತಿ ಕಲೆ ಹಾಕಿದ್ದಾರೆ. ಬಿಎಲ್ಒಗಳು ನೀಡಿರುವ ಮಾಹಿತಿ ಆಧಾರದ ಮೇಲೆ ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದೆ.
ಅದರಲ್ಲಿ ಒಟ್ಟು 6,69,652 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ಡಿಲೀಟ್ ಆದವರಲ್ಲಿ ಬದುಕಿರುವವರ ಹೆಸರು ಸಹ ಇದೆ ಎನ್ನಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಹಿಂದೆ ಚಿಲುಮೆ ಸಂಸ್ಥೆಯ ಕೈವಾಡ ಇದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.