ನವದೆಹಲಿ,ಸೆ.11 : ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ದೇಶಾದ್ಯಂತ ನಾಳೆ ನೀಟ್ ಪರೀಕ್ಷೆ ನಡೆಯಲಿದ್ದು, ಕರ್ನಾಟಕದಲ್ಲಿ ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿವೆ.
ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆಗಳು ನಡೆಯಲಿವೆ. ಎಂಬಿಬಿಎಸ್, ಬಿಡಿಎಸ್, ಆಯುಷ್ನ ಬಿಎಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಕೋರ್ಸ್ಗಳಿಗೆ ದೇಶಾದ್ಯಂತ ರಾಷ್ಟ್ರೀಕೃತ ಪ್ರವೇಶ ವ್ಯವಸ್ಥೆ ರೂಪಿಸಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆ ಆಯೋಜಿಸಿದೆ. ಸುಮಾರು 16 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಜೀವಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ಸಂಚಾರವನ್ನು ಆರಂಭಿಸಿದೆ.