ನವದೆಹಲಿ : ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾದ ಬಳಿಕ ಇದೀಗ ಕೇಂದ್ರ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಗೈಡ್ಲೈನ್ ಬಿಡುಗಡೆ ಮಾಡಿದೆ.
ವಿದೇಶದಿಂದ ಆಗಮಿಸಿದ್ದ ಕೇರಳದ ಕೊಲ್ಲಂನ ವ್ಯಕ್ತಿಯೋರ್ವನಿಗೆ ನಿನ್ನೆ ಮಂಕಿಪಾಕ್ಸ್ ಸೋಂಕಿರುವುದು ದೃಢವಾಗಿತ್ತು. ಆ ಬಳಿಕ ಇದೀಗ ವಿದೇಶದಿಂದ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರ ಮೇಲೆ ಕೇಂದ್ರ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು.
ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು. ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್ ಲೋಷನ್ಗಳನ್ನು ಬಳಸಬಾರದು ಮತ್ತು ತರಬಾರದೆಂದು ಗೈಡ್ಲೈನ್ನಲ್ಲಿ ಸ್ಪಷ್ಟಪಡಿಸಲಾಗಿದೆ.