ರಾಜ್ಯ ರಾಜಕಾರಣಕ್ಕೆ ಹೊಸ ಟ್ವಿಸ್ಟ್?!
ನಿನ್ನೆಯಷ್ಟೇ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ರಚಿಸುವುದಾಗಿ ಹೇಳಿಕೆ ಕೊಟ್ಟಿದ್ದರು. ಇಂದು ಬೆಳ್ಳಂ ಬೆಳಿಗ್ಗೆಯೇ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಎಚ್ ಡಿಕೆ ತಂಗಿದ್ದ ಹೋಟೆಲ್ ಗೆ ಭೇಟಿ ನೀಡಿದ್ದಾರೆ.
ಎಚ್ ಡಿಕೆ ಭೇಠಿಯಾಗಿ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ ಪ್ರಕಾಶ್ ಜಾವೇಡ್ಕರ್ ಬಳಿಕ ಹಿಂತಿರುಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಕೋರಿರಬಹುದು ಎನ್ನಲಾಗಿದೆ. ಆದರೆ ಮಾತುಕತೆ ಬಳಿಕ ಹೋಟೆಲ್ ನಿಂದ ಹೊರಬಂದ ಪ್ರಕಾಶ್ ಜಾವೇಡ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಹೊರ ನಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.