ನೈಟ್ ಕರ್ಫ್ಯೂ ಜಾರಿ?

ಶನಿವಾರ, 25 ಡಿಸೆಂಬರ್ 2021 (11:26 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ನಾಳಿನ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ 7ನೇ ಸ್ಥಾನದಲ್ಲಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈಗಾಗಲೇ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೇ ಕ್ರಮವನ್ನು ರಾಜ್ಯದಲ್ಲೂ ಮತ್ತೆ ಜಾರಿಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ