ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ : ಸುಪ್ರೀಂ
ದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಆದೇಶ ಪ್ರಕಟಿಸಿತ್ತು.
ವಕ್ಫ್ ಬೋರ್ಡ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಸರ್ಕಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.