ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ಡೌನ್ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.
ಹೀಗಾಗಿ ಲಾಕ್ಡೌನ್ನಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಬಹಿರಂಗ ಸಮಾವೇಶ, ಗುಂಪು ಸೇರುವುದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.