ನವದೆಹಲಿ : ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳನ್ನು ನೋಡುತ್ತವೆ.
ಅಲ್ಲಿ ಟೋಲ್ ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.
ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ, ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ.
ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.
ಫಾಸ್ಟ್ಯಾಗ್ಗಳನ್ನು ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್ಪ್ಲೇಟ್(ಸ್ವಯಂಚಾಲಿನ ನಂಬರ್ಪ್ಲೇಟ್ ರೀಡರ್ ಕ್ಯಾಮೆರಾ ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ.
ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.