ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು. ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.
ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮಾತ್ರವೇ ಬಳಸಬೇಕು, ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆ ಸಲ್ಲಿಸಬೇಕು. ಆದರೆ ಶುಕ್ರವಾರದ ಪ್ರಾರ್ಥನೆ ಸಲ್ಲಿಸಲು ಅವಾಶಕ ಇರುವುದಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಪೀಠ ಆದೇಶಿಸಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿದೆ.
ರಂಜಾನ್ ಹಾಗೂ ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಆದರೆ ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಜೊತೆಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಯಾವುದೇ ಅನುಮತಿ ಬೇಕಿಲ್ಲ ಎಂದು ಹೇಳಿರುವ ಪೀಠವು ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ (ವಿವಾದ) ರೀತಿಯಲ್ಲಿ ಮಾಡಬೇಡಿ.
ಯಾವುದೇ ವಿವಾದಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.