ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಗುರುವಾರ, 13 ಏಪ್ರಿಲ್ 2023 (08:54 IST)
ಬೆಂಗಳೂರು : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ.
 
ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ