ಈ ಬಾರಿ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಳೆ

ಶುಕ್ರವಾರ, 1 ಅಕ್ಟೋಬರ್ 2021 (08:29 IST)
ನವದೆಹಲಿ : ಈ ಬಾರಿ ಮುಂಗಾರು ಅವಧಿಯಲ್ಲಿ, ಅಂದರೆ ಜೂನ್ ತಿಂಗಳಿನಿಂದ ಸೆಪ್ಟೆಂಬರ್ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.

ಅಕ್ಟೋಬರ್ನಿಂದ ಡಿಸೆಂಬರ್ವರೆಗೆ ದೇಶದ ದಕ್ಷಿಣ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಅವಧಿಯಲ್ಲಿ ಕೂಡ ಸಾಮಾನ್ಯ ಮಳೆ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.
ಈ ಮುಂಗಾರು ಋತುವಿನಲ್ಲಿ, ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಒಟ್ಟಾರೆಯಾಗಿ 87 ಸೆ.ಮೀ.ನಷ್ಟು ದೀರ್ಘಾವಧಿಯ ಸರಾಸರಿ ಮಳೆ ದಾಖಲಾಗಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಟ್ಟದಲ್ಲಿ ಮಳೆ ದಾಖಲಾಗಿದೆ. ಮುಂಗಾರು ದೀರ್ಘಾವಧಿ ಮಳೆ (ದೀರ್ಘಾವಧಿ ಸರಾಸರಿ ಮಳೆ ಪ್ರಮಾಣದ 96- 106%) ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ.
ಸತತ ಮೂರನೇ ವರ್ಷ ದೇಶದಲ್ಲಿ ಸಾಮಾನ್ಯ ಮಳೆ ಅಥವಾ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಿಸಿದೆ. 2019 ಹಾಗೂ 2020ರಲ್ಲಿ ಕೂಡ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ