ಬೆಂಗಳೂರು: ಉತ್ತರ ಕರ್ನಾಟಕ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗಿನಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು, ಜನರೂ ತಮ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾದಂತೆ ತೋರುತ್ತಿಲ್ಲ.
ಇನ್ನು ಉತ್ತರ ಕರ್ನಾಟಕ ನಿರ್ಲಕ್ಷ್ಯ ಧೋರಣೆ ಖಂಡಿಸಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿರುವ ರೈತ ಸಂಘದ ನಾಯಕ ವಿರೂಪಾಕ್ಷ, ಬಂದ್ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ. ಆದರೆ ಸಾಂಕೇತಿಕ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ‍್ಯಕ್ಷ ಬೋಳಶೆಟ್ಟಿ ಪ್ರತ್ಯೇಕ ರಾಜ್ಯ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ನಮ್ಮ ಹೋರಾಟದ ಮೊದಲ ಹೆಜ್ಜೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.