ಗಮನಿಸಿ : ನಿಷೇಧಿತ ಪಟಾಕಿ ಸಿಡಿಸಿದ್ರೆ 6 ತಿಂಗಳು ಜೈಲು ಶಿಕ್ಷೆ!

ಮಂಗಳವಾರ, 25 ಅಕ್ಟೋಬರ್ 2022 (10:31 IST)
ನವದೆಹಲಿ : ರಾಜಧಾನಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂ. ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಶೇಖರಣೆ ಮತ್ತು ಮಾರಾಟ ಮಾಡಿದರೆ 5,000 ರೂ. ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೆಹಲಿ ಸರ್ಕಾರವು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಗೆ ಜನವರಿ 1 ರವರೆಗೆ ಸಂಪೂರ್ಣ ನಿಷೇಧ ವಿಧಿಸಿದೆ. ಇದು ಕಳೆದ ಎರಡು ವರ್ಷಗಳಿಂದ ಅನುಸರಿಸುತ್ತಿರುವ ಕ್ರಮವಾಗಿದೆ.

ಅಕ್ಟೋಬರ್ 21 ರಂದು ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ