ಬೆಂಗಳೂರಿಗರೇ ಗಮನಿಸಿ: ನಾಳೆಯಿಂದ ಮೆಟ್ರೋ ಅವಧಿ ವಿಸ್ತರಣೆ

ಭಾನುವಾರ, 19 ಡಿಸೆಂಬರ್ 2021 (17:06 IST)
ಬೆಂಗಳೂರು : ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) ನಿರ್ಧರಿಸಿದೆ.
 
ಇಷ್ಟು ದಿನ ಬೆಳಗ್ಗೆ 6ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೋ ರೈಲು ಸಂಚಾರ ಸೇವೆಗಳು ಡಿಸೆಂಬರ್ 20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ಪ್ರಕಟಿಸಿದೆ.

ಕೋವಿಡ್ಗೂ ಮುನ್ನ ಇದ್ದ ವೇಳಾಪಟ್ಟಿಯಂತೆಯೇ ಮೆಟ್ರೋ ಸೇವೆಗಳು ಎಂದಿನಂತೆ ಡಿಸೆಂಬರ್ 20ರಿಂದ ಪ್ರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ರೈಲು ಟರ್ಮಿನಲ್ ನಿಲ್ದಾಣಗಳಾದ ಕೆಂಗೇರಿ, ಸಿಲ್ಕ್ ಇನ್ಸ್ಟಿಟ್ಯೂಟ್, ನಾಗಸಂದ್ರ ಮತ್ತು ಬೈಯಪ್ಪನಹಳ್ಳಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಡಲಿದೆ.

ಈ ನಿಲ್ದಾಣಗಳಿಂದ ಕೊನೆಯದಾಗಿ ರಾತ್ರಿ 11 ಗಂಟೆಗೆ ರೈಲು ಸಂಚರಿಸಲಿದೆ ಮತ್ತು ಎಂದಿನಂತೆ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ