ಗಮನಿಸಿ.! ಬೆಂಗಳೂರಲ್ಲಿಂದು ಸಾಲು ಸಾಲು ಪ್ರತಿಭಟನೆ, ಟ್ರಾಫಿಕ್ ಜಾಮ್ ಸಾಧ್ಯತೆ
ಸೋಮವಾರ, 20 ಸೆಪ್ಟಂಬರ್ 2021 (10:55 IST)
ಬೆಂಗಳೂರು : ಬೆಂಗಳೂರು ನಗರದಲ್ಲಿ ಇಂದು ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.
ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದು, ಫ್ರೀಡಂ ಪಾರ್ಕ್ ಮೂಲಕವಾಗಿ ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮತ್ತೊಂದು ಕಡೆ ಅತಿಥಿ ಬೋಧಕರು ಪ್ರತಿಭಟನೆ ಕೈಗೊಂಡಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ನಿಂದ ಸೈಕಲ್ ಜಾಥಾ ಕೈಗೊಳ್ಳಲಾಗಿದೆ. ಕಾಂಗ್ರೆಸ್ ನಾಯಕಾರದ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ. ಸಾಲು ಸಾಲು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಬದಲಿ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಬಹುದು. ಹಲವು ರಸ್ತೆಗಳಲ್ಲಿ ಟ್ರಾಫಿಕ್ ಉಂಟಾಗಬಹುದು ಎಂದು ಹೇಳಲಾಗಿದೆ.