ಭಾರತದಲ್ಲಿ ನಿಗಾ ವಹಿಸಲು ಸೂಚನೆ?

ಗುರುವಾರ, 17 ಮಾರ್ಚ್ 2022 (14:04 IST)
ದೇಶ – ವಿದೇಶಗಳಲ್ಲಿ ಮತ್ತೆ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಕಳೆದ ಒಂದೇ ವಾರದಲ್ಲಿ ವಿವಿಧೆಡೆಯಿಂದ 11 ಮಿಲಿಯನ್ನಷ್ಟು ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.

ಯುರೋಪ್ ಮತ್ತು ಪೂರ್ವ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಹಾಗೂ ಜಾಗರೂಕತೆ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,539 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಉನ್ನತ ಸಭೆ ನಡೆಸಿರುವ ಅವರು, ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ