ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ!

ಶನಿವಾರ, 15 ಜನವರಿ 2022 (14:13 IST)
ಜಿನಿವಾ : ಇದುವರೆಗೆ ಕೊರೊನಾ ಲಸಿಕೆ ಪಡೆಯದ ಮಂದಿಗೆ ಒಮಿಕ್ರಾನ್ ರೂಪಾಂತರಿ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
 
ಒಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ನಿಂದಾಗಿ ಜಾಗತಿಕವಾಗಿ ಕೋವಿಡ್ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಡೆಲ್ಟಾಗಿಂತಲೂ ಒಮಿಕ್ರಾನ್ ಬಹಳ ವೇಗವಾಗಿ ಹರಡುತ್ತಿದ್ದು, ಇದನ್ನು ಎಂಡೆಮಿಕ್ ಅಂತಾ ಪರಿಗಣಿಸಲು ಸಾಧ್ಯವಿಲ್ಲ ಎಂದೂ ಡಬ್ಲ್ಯೂಎಚ್ಒ ಹೇಳಿದೆ.

ಕೊರೊನಾ ವೈರಸ್ ಸೋಂಕಿನ ಪ್ರಮಾಣ ಜಾಗತಿಕವಾಗಿ ತೀವ್ರ ಸ್ವರೂಪದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಮಿಕ್ರಾನ್ ವೈರಸ್ ಅನ್ನು ಸೋಂಕು ಕೊನೆಯಾಗುವ ಲಕ್ಷಣ ಎಂದು ಈಗಲೇ ಪರಿಗಣಿಸಲು ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಡೆಲ್ಟಾಗಿಂತಲೂ ಒಮಿಕ್ರಾನ್ ಅಷ್ಟೇನೂ ಅಪಾಯಕಾರಿ ಅಲ್ಲವಾದರೂ ಈ ರೂಪಾಂತರಿಯ ಅಪಾಯ ಇದ್ದೇ ಇದೆ. ಕೊರೊನಾ ಲಸಿಕೆ ಪಡೆದವರು ಆಸ್ಪತ್ರೆಗೆ ದಾಖಲಾಗುವಷ್ಟು ಗಂಭೀರ ಸ್ವರೂಪದ ರೋಗ ಲಕ್ಷಣ ಹೊಂದಿರುವುದಿಲ್ಲ, ಇನ್ನು ಸಾವಿನ ಪ್ರಮಾಣ ಕೂಡಾ ಡೆಲ್ಟಾಗೆ ಹೋಲಿಸಿದರೆ ಕಡಿಮೆ ಎಂದು ಹೇಳಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ