ರಾಜ್ಯದಲ್ಲಿ ಮತ್ತಷ್ಟು ಏರಿಕೆಯತ್ತ ಓಮಿಕ್ರಾನ್!

ಗುರುವಾರ, 30 ಡಿಸೆಂಬರ್ 2021 (09:32 IST)
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹೊಸ 5 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಕರ್ನಾಟಕದಲ್ಲಿ 43ಕ್ಕೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಈ ಕುರಿತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಅಮೆರಿಕದಿಂದ ರಾಜ್ಯಕ್ಕೆ ಬಂದ 22 ವರ್ಷದ ಯುವತಿ ಮತ್ತು 24 ವರ್ಷದ ಯುವಕ, ದುಬೈನಿಂದ ಬಂದ 53 ವರ್ಷದ ವ್ಯಕ್ತಿ, ಘಾನಾ ದೇಶದಿಂದ ಬಂದ 61 ವರ್ಷದ ವ್ಯಕ್ತಿ ಹಾಗೂ ಮುಂಬೈನಿಂದ ಬಂದ 41 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.

ಸೋಂಕಿತರ ಟ್ರಾವೆಲ್ ಹಿಸ್ಟ್ರಿ ಗಮನಸಿದರೆ ಡಿ.22ರಂದು ಅಮೆರಿಕದಿಂದ ಬೆಂಗಳೂರಿಗೆ ಯುವತಿ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದ ವೇಳೆ ಯುವತಿಗೆ ಕೊರೊನಾ ದೃಢಪಟ್ಟಿದೆ.
ಅಲ್ಲದೇ ಈ ಯುವತಿ ಎರಡು ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ತಿಳಿಸಲಾಗಿದೆ. ಯುವತಿ ದಾವಣಗೆರೆ ಮೂಲದವರಾಗಿದ್ದು, ಇದೀಗ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ