ಉಕ್ರೇನಿಂದ ಬಂದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್

ಬುಧವಾರ, 16 ಮಾರ್ಚ್ 2022 (09:48 IST)
ನವದೆಹಲಿ : ಯುದ್ಧಪೀಡಿತ ಉಕ್ರೇನಿನಿಂದ ಭಾರತಕ್ಕೆ ಮರಳಿರುವ ವೈದ್ಯ ವಿದ್ಯಾರ್ಥಿಗಳಿಗೆ ಉಕ್ರೇನಿನ ಹಲವು ವಿಶ್ವ ವಿದ್ಯಾಲಯಗಳು ಆನ್ಲೈನ್ ತರಗತಿಗಳನ್ನು ಆರಂಭಿಸಿವೆ.
 
ತನ್ಮೂಲಕ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಮೊಟಕುಗೊಳಿಸಿ ಮುಂದೇನು ಎಂದು ತಿಳಿಯದೆ ಕಂಗಾಲಾಗಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳ ಆತಂಕ ನಿವಾರಣೆಯಾಗಿದೆ.

ವಿಷಯ ತಿಳಿದು ಹಲವು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೆಲ ವಿದ್ಯಾರ್ಥಿಗಳು ಪ್ರಾಯೋಗಿಕ ತರಗತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಚಿಂತಿತರಾಗಿದ್ದಾರೆ.

ಹಲವು ವಿಶ್ವವಿದ್ಯಾಲಯಗಳು ಅದರಲ್ಲೂ ಪಶ್ಚಿಮ ಉಕ್ರೇನ್ನಲ್ಲಿರುವ ವಿಶ್ವವಿದ್ಯಾಲಯಗಳು ಸೋಮವಾರದಿಂದ ಆನ್ಲೈನ್ ತರಗತಿಗಳನ್ನು ಆರಂಭಿಸಿವೆ.

ಲೀವ್ ನ್ಯಾಷನಲ್ ಮೆಡಿಕಲ್ ಯುನಿವರ್ಸಿಟಿ, ಇವಾನೋ-ಫ್ರಾಂಕಿವ್ಸ್ಕ್ ಮೆಡಿಕಲ್ ಯುನಿವರ್ಸಿಟಿ, ವಿನ್ನಿಸ್ತಿಯಾ ನ್ಯಾಷನಲ್ ಪಿರೋಗೋವ್ ಮೆಡಿಕಲ್ ಯುನಿವರ್ಸಿಟಿ ಮತ್ತು ಬೊಗೋಮೊಲೆಟ್ಸ್ ನ್ಯಾಷನಲ್ ಮೆಡಿಕಲ್ ವಿಶ್ವವಿದ್ಯಾಲಯಗಳು ಸೋಮವಾರದಿಂದ ತರಗತಿ ಆರಂಭಿಸಿದೆ.

ಇನ್ನೂ ಹಲವು ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿ ಆರಂಭಿಸಲು ಯೋಜಿಸುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ