ಆನ್ಲೈನ್ ಫುಡ್, ಅಮೆಜಾನ್, ಪ್ಲಿಪ್ಕಾರ್ಟ್ ಹೋಂ ಡೆಲಿವರಿ ಬಂದ್!
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಗರದಲ್ಲಿ 3 ದಿನ ಲಾಕ್ಡೌನ್ ಊಹಾಪೋಹವನ್ನು ತಳ್ಳಿಹಾಕಿದ್ದಾರೆ. ಜಿ20 ಶೃಂಗಸಭೆಯ ಸಮಯದಲ್ಲಿ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಗೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ನಗರದಲ್ಲಿನ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಸರ್ಕಾರ ನಿರ್ದೇಶಿಸಿದೆ.