ಆನ್‍ಲೈನ್ ಗೇಮ್ ನಿಷೇಧ ರದ್ದು! ಸುಪ್ರೀಂಗೆ ಅರ್ಜಿ

ಬುಧವಾರ, 30 ಮಾರ್ಚ್ 2022 (13:16 IST)
ನವದೆಹಲಿ : ರಮ್ಮಿ, ಡ್ರೀಮ್ 11 ಸೇರಿದಂತೆ ಆನ್ಲೈನ್ ಗೇಮ್ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡಿದ್ದಾರೆ.

ಸರ್ಕಾರ ಆನ್ಲೈನ್ ಗೇಮ್ ನಿಷೇಧಿಸಲು ನಿರ್ಧಾರಿಸಿದ್ದು, ಇದರಿಂದ ಹಣಕಾಸಿನ ಅಪಾಯ ಹೆಚ್ಚಿದೆ ಎಂದು ತಿಳಿಸಿದೆ. ಇದರಿಂದ ಕಳೆದ ವರ್ಷ 28,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಆನ್ಲೈನ್ ಗೇಮ್ ಜನರನ್ನು ತಪ್ಪುದಾರಿಗೆ ಎಳೆಯಬಹುದು. ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡಲು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.

ಇದು 19 ನೇ ವಿಧಿಯ ಉಲ್ಲಂಘನೆ ಅಲ್ಲ, ಹೈಕೋರ್ಟ್ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. 

ನಂತರ ಹೈಕೋರ್ಟ್ ಕಾಯ್ದೆಯ ಸೆಕ್ಷನ್ 2, 3, 6, 8 ಮತ್ತು 9 ಅನ್ನು ರದ್ದುಪಡಿಸಿ ರಾಜ್ಯ ಸರ್ಕಾರದ ತಿದ್ದುಪಡಿಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ