ರಾಫೆಲ್ ವಿಮಾನ ಅಗ್ಗವಾದರೆ ಎನ್ ಡಿಎ ಯಾಕೆ ಕಡಿಮೆ ವಿಮಾನ ಖರೀದಿಸುತ್ತಿದೆ? ಪಿ ಚಿದಂಬರಂ ಪ್ರಶ್ನೆ

ಭಾನುವಾರ, 30 ಸೆಪ್ಟಂಬರ್ 2018 (11:11 IST)
ನವದೆಹಲಿ: ರಾಫೆಲ್ ಯುದ್ಧ ವಿಮಾನಗಳು ಅಷ್ಟೊಂದು ಅಗ್ಗದ ಬೆಲೆಗೆ ಕೇಂದ್ರ ಸರ್ಕಾರ ಕೊಳ್ಳುತ್ತಿದ್ದರೆ ಯಾಕೆ ಕೇವಲ 36 ವಿಮಾನಗಳನ್ನು ಖರೀದಿಸುತ್ತಿದೆ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ರಾಫೆಲ್ ಡೀಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಕಾಂಗ್ರೆಸ್ ಮತ್ತು ಅದರ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಆದರೆ ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತಲೇ ಇದೆ.

‘ಹಿಂದಿನ ಯುಪಿಎ ಸರ್ಕಾರ 126 ಜೆಟ್ ವಿಮಾನಗಳಿಗೆ ಒಪ್ಪಂದ ಮಾಡಿಕೊಂಡಿತ್ತು. ಅದನ್ನು ಈಗಿನ ಸರ್ಕಾರ ರದ್ದುಗೊಳಿಸಿ ಕೇವಲ 36 ಕ್ಕೆ ಇಳಿಕೆ ಮಾಡಿದ್ದು ಯಾಕೆ? ‘ ಎಂದು ಸರಣಿ ಟ್ವೀಟ್ ಗಳ ಮೂಲಕ ಪಿ ಚಿದಂಬರಂ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ