ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗೆ ದುಡ್ಡು ಪಾವತಿಸಬೇಕು

ಸೋಮವಾರ, 20 ಫೆಬ್ರವರಿ 2023 (10:31 IST)
ವಾಷಿಂಗ್ಟನ್ : ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ನಂತೆ ಇದೀಗ ಮೆಟಾ ಕೂಡಾ ತನ್ನ ಫೋಟೋ ಹಂಚಿಕೆ ಅಪ್ಲಿಕೇಶನ್ಗಳಾದ ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗಾಗಿ ಪಾವತಿ ಮಾಡುವ ಯೋಜನೆಯನ್ನು ಘೋಷಿಸಿದೆ.
 
ಕೆಲ ತಿಂಗಳ ಹಿಂದೆ ಟ್ವಿಟ್ಟರ್ ತನ್ನ ಬಳಕೆದಾರರು ನೀಲಿ ಬಣ್ಣದ ಟಿಕ್ ಮಾರ್ಕ್ಗಳನ್ನು ಹೊಂದಲು ಪಾವತಿ ಮಾಡುವ ನಿಯಮವನ್ನು ಜಾರಿಗೊಳಿಸಿತ್ತು. ಇತ್ತೀಚೆಗಷ್ಟೇ ಈ ನಿಯಮ ಭಾರತದಕ್ಕೂ ಬಂದಿದೆ.

ಇದೀಗ ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗಾಗಿ ಪಾವತಿ ಮಾಡಬೇಕೆಂದು ಮಾತೃ ಸಂಸ್ಥೆಯಾದ ಮೆಟಾ ತಿಳಿಸಿದೆ.

ಮೆಟಾ ಈ ಯೋಜನೆಯನ್ನು ಇದೇ ವಾರದಲ್ಲಿ ಜಾರಿಗೊಳಿಸುವುದಾಗಿ ತಿಳಿಸಿದೆ. ಆರಂಭದಲ್ಲಿ ಈ ಸೇವೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ನಲ್ಲಿ ಆರಂಭವಾಗಲಿದ್ದು, ಬಳಿಕ ಶೀಘ್ರದಲ್ಲೇ ಇತರ ದೇಶಗಳಿಗೂ ವಿಸ್ತರಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ