ಮತ್ತೆ ತೆರೆಮರೆಯಲ್ಲಿ ಪರಮೇಶ್ವರ್-ಸಿದ್ದರಾಮಯ್ಯ ಹಗ್ಗಜಗ್ಗಾಟ

ಗುರುವಾರ, 23 ಆಗಸ್ಟ್ 2018 (08:49 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿರುವ ಜಿ ಪರಮೇಶ್ವರ್ ಮತ್ತು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ.


ಸಮನ್ವಯ ಸಮಿತಿ ಸಭೆ ಕರೆಯುವ ವಿಚಾರದಲ್ಲಿ ಎರಡೂ ನಾಯಕರ ನಡುವೆ ಮತ್ತೆ ಹಗ್ಗ ಜಗ್ಗಾಟ ಶುರುವಾಗಿದೆ. ಸಿದ್ದರಾಮಯ್ಯ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮೊದಲು ಸಮನ್ವಯ ಸಮಿತಿ ಸಭೆ ಕರೆಯಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಇದಕ್ಕೆ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಸೊಪ್ಪು ಹಾಕುತ್ತಿಲ್ಲ. ಒಂದು ವೇಳೆ ಸಮನ್ವಯ ಸಮಿತಿ ಸಭೆ ನಡೆದರೆ ಸಿದ್ದರಾಮಯ್ಯ ಮಾತಿಗೆ ಬೆಲೆ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಇಬ್ಬರೂ ನಾಯಕರು ಸಭೆ ಮುಂದೂಡಲು ನೆಪ ಹೂಡುತ್ತಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿ ಪರಮೇಶ್ವರ್ ‘ರಾಜ್ಯದ ಹಲೆವೆಡೆ ವಿಪರೀತ ಮಳೆಯಾಗಿ ನೆರೆ ಪರಿಸ್ಥಿತಿ ಇದೆ. ಹೀಗಾಗಿ ಸಮನ್ವಯ ಸಮಿತಿ ಸಭೆ ನಡೆಸಲು ಸಮಯವಾಗಿಲ್ಲ ಅಷ್ಟೇ. ಇದರಲ್ಲಿ ಬೇರೆ ಯಾವ ಕಾರಣವೂ ಇಲ್ಲ’ ಎಂದು ಸಮಜಾಯಿಷಿ ನೀಡಿದ್ದಾರೆ. ಆದರೆ ಬೇಕೆಂದೇ ಸಿದ್ದರಾಮಯ್ಯರನ್ನು ಸರ್ಕಾರದ ನಿಯಂತ್ರಣ ತೆಗೆದುಕೊಳ್ಳುವುದರಿಂದ ದೂರವಿಡಲು ಈ ತಂತ್ರ ಅನುಸರಿಸಲಾಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ