ಮಳೆಯ ಸಂಕಷ್ಟಕ್ಕೆ ಸಿಲುಕಿದ ಜನತೆ!

ಶನಿವಾರ, 16 ಜುಲೈ 2022 (11:19 IST)
ಗಾಂಧಿನಗರ : ಮುಂಬೈ, ಮಹಾರಾಷ್ಟ್ರದ ಬಳಿಕ ಗುಜರಾತ್ನಲ್ಲೂ ಮಳೆಯ ಆರ್ಭಟ ಹೆಚ್ಚಾಗುತ್ತಿದೆ.

ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗುಜರಾತಿನ 8 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಮುಂಬೈ ಮತ್ತು ಅದರ ಉಪನಗರಗಳಲ್ಲಿ ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. 

ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಿನ್ನೆ ನಾಲ್ವರು ಮೃತಪಟ್ಟಿದ್ದಾರೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಒಟ್ಟು ಮಳೆಯ ಪ್ರಮಾಣ ಶೇ.99 ತಲುಪಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಜೂನ್ 1 ರಂದು ಮುಂಗಾರು ಋತುವಿನ ಆರಂಭವನ್ನು ತೆಗೆದುಕೊಂಡು ಮಳೆ ಹಾನಿಯನ್ನು ಅಂದಾಜಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಟ್ಟು 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಮತ್ತು 6 ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎಸ್ಡಿಆರ್ಎಫ್) ನಿಯೋಜಿಸಲಾಗಿದೆ. ಇವು ಮಳೆಹಾನಿ ಪ್ರದೇಶಗಳಿಗೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ