ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಕಾಂಗ್ರೆಸ್ ಯತ್ನ: ಮೋದಿ, ಶಾ ಟೀಕೆ
ಬುಧವಾರ, 16 ಮೇ 2018 (07:45 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
40 ಸೀಟು ಹೊಂದಿದ್ದ ಬಿಜೆಪಿ ರಾಜ್ಯದಲ್ಲಿ ಈಗ 104 ಸ್ಥಾನಕ್ಕೇರಿದೆ. ಇದು ಬಿಜೆಪಿಯ ಗೆಲುವಲ್ಲವೇ? ಬಹುಮತವಿಲ್ಲ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಅಮಿತ್ ಶಾ ಟೀಕೆ ಮಾಡಿದ್ದಾರೆ.
ಮತ್ತೊಂದೆಡೆ ಪ್ರಧಾನಿ ಮೋದಿ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನ್ನು ಕರ್ನಾಟಕದಲ್ಲಿ ಜನ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಹಾಗಿದ್ದರೂ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಈ ನಡುವೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮೋದಿ, ಶಾ ಧನ್ಯವಾದ ಸಲ್ಲಿಸಿದ್ದಾರೆ.
ಅಲ್ಲದೆ, ಉರಿಬಿಸಿಲಿದ್ದರೂ ಕರ್ನಾಟಕದ ಜನತೆ ತಮ್ಮ ಸಮಾವೇಶಗಳಿಗೆ ಬಂದಿದ್ದನ್ನು ಸ್ಮರಿಸಿಕೊಂಡರು. ಅಷ್ಟೇ ಅಲ್ಲ, ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿ ಎಂದು ಹೃದಯವಂತಿಕೆ ಮೆರೆದ ಕನ್ನಡಿಗರಿಗೆ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.