ಲೋಕಸಭೆ ಚುನಾವಣೆಗಾಗಿ ಪ್ರಧಾನಿ ಮೋದಿ ಎಂಥಾ ಕೆಲಸ ಮಾಡಲಿದ್ದಾರೆ ಗೊತ್ತಾ?

ಶನಿವಾರ, 14 ಜುಲೈ 2018 (09:13 IST)
ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನಲೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ ಭಾರೀ ಕಸರತ್ತು ಮಾಡಲಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಮೋದಿಯೇ ಸ್ಟಾರ್ ಪ್ರಚಾರಕರಾಗಿದ್ದರು. ಪ್ರಧಾನಿ ಮೋದಿ ರ್ಯಾಲಿಯಿಂದಲೇ ಜನಮನ ಗೆದ್ದಿದ್ದರು. ಈ ಬಾರಿ ಮತ್ತೆ ಅದನ್ನೇ ಮಾಡಲು ಮೋದಿ ಮುಂದಾಗಿದ್ದಾರೆ.

ಮುಂದಿನ ವರ್ಷ ಫೆಬ್ರವರಿಯೊಳಗೆ ಪ್ರಧಾನಿ ಮೋದಿ ದೇಶದಾದ್ಯಂತ ಸುಮಾರು 50 ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರಂತೆ! ಈ ಸಂದರ್ಭದಲ್ಲಿ ಸುಮಾರು 100 ಲೋಕಸಭೆ ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಮೋದಿಯಷ್ಟೇ ಅಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಇಷ್ಟೇ ಸಂಖ್ಯೆಯ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಮೂಲಕ ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲು ತಯಾರಿ ನಡೆಸಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ