ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು! ಹೇಗೆ ಗೊತ್ತ?

ಸೋಮವಾರ, 10 ಜನವರಿ 2022 (07:51 IST)
ನವದೆಹಲಿ : ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ