ನವದೆಹಲಿ : ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ.
ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು.
ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.