ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಶುಕ್ರವಾರ, 12 ಮೇ 2023 (14:48 IST)
ಬೆಂಗಳೂರು : ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಸೆಕ್ಷನ್ ಜಾರಿ ಮಾಡಲಾಗಿದೆ.
 
ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮತ ಎಣಿಕೆ ಕೇಂದ್ರಗಳನ್ನೊಳಗೊಂಡಂತೆ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. 

5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ನಿಷೇಧ. ಮದುವೆ ಹಾಗೂ ಶವಸಂಸ್ಕಾರವನ್ನ ಹೊರತುಪಡಿಸಿ ಉಳಿದೆಲ್ಲದಕ್ಕೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ. ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ